ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಎಥಿಲೀನ್ ಡೈಕ್ಲೋರೈಡ್

ವಿಕಿಸೋರ್ಸ್ದಿಂದ

ಎಥಿಲೀನ್ ಡೈಕ್ಲೋರೈಡ್

CICH2-CH2CI. ಎಥಿಲೀನ್ ಕ್ಲೋರೈಡ್ ಎಂಬ ಹೆಸರೂ ಇದೆ. ಎಥಿಲೀನ್ ಮತ್ತು ಕ್ಲೋರಿನುಗಳ ನೇರ ಸಂಯೋಗದಿಂದ ಇದನ್ನು ತಯಾರಿಸುತ್ತಾರೆ. ಎರಡು ಅನಿಲಗಳನ್ನೂ ಸರಿಯಾದ ಪ್ರಮಾಣದಲ್ಲಿ ಬೆರೆಸಿ, ಮಿಶ್ರಣವನ್ನು 80ಲಿ-100ಲಿ ಸೆಂ. ಗ್ರೇ. ಉಷ್ಣತೆಗೆ ಕಾಯಿಸಿದ ತಾಮ್ರ. ಕಬ್ಬಿಣ ಅಥವಾ ಜಲರಹಿತ ಕ್ಯಾಲ್ಸಿಯಂ ಕ್ಲೋರೈಡಿನ ಮೇಲೆ ಹಾಯಿಸಿದರೆ ಎಥಿಲೀನ್ ಡೈಕ್ಲೋರೈಡ್ ಉತ್ಪತ್ತಿಯಾಗುತ್ತದೆ.

C2H4+CI2→C2H4CI2

ಸೂಕ್ತವಾದ ಕ್ಲೋರಿನೀಕರಿಸಿದ ಒಂದು ಹೈಡ್ರೊಕಾರ್ಬನ್ನನ್ನು ದ್ರಾವಕವಾಗಿ ಉಪಯೋಗಿಸುವುದಾದರೆ ದ್ರಾವಣದಲ್ಲಿ 40ಲಿ ಸೆಂ. ಗ್ರೇ. ಉಷ್ಣತೆಯಲ್ಲಿಯೇ ಈ ಕ್ರಿಯೆಯನ್ನು ಆಗಮಾಡಬಹುದು.

ಎಥಿಲೀನ್ ಡೈಕ್ಲೋರೈಡ್ ಬಣ್ಣವಿಲ್ಲದ ದ್ರವಪದಾರ್ಥ. ಇದರ ಕುದಿಬಿಂದು 84ಲಿ ಸೆಂ. ಗ್ರೇ. ಇದು ಒಳ್ಳೆಯ ದ್ರಾವಕ (ಸಾಲ್ವೆಂಟ್). ಒಣ ಒಗೆತಕ್ಕ ಅಂದರೆ ಜಲರಹಿತಮಾರ್ಜನಕ್ಕೆ (ಡ್ರೈಕ್ಲೀನಿಂಗ್) ಇದನ್ನು ಬಳಸುತ್ತಾರೆ. ಮೋಟಾರು ವಾಹನಗಳ ಎಂಜಿನ್ನುಗಳಲ್ಲಿ ಆಗುವ ಕುಕ್ಕಾಟವನ್ನು (ನಾಕಿಂಗ್) ತಪ್ಪಿಸುವುದಕ್ಕಾಗಿ ಪೆಟ್ರೋಲಿಗೆ ಬೆರೆಸುವ ಈಥೈಲ್ ಫ್ಲೂಯ್ಡಿನಲ್ಲಿ ಸಾಮಾನ್ಯವಾಗಿ 10% ಎಥಿಲೀನ್ ಡೈಕ್ಲೋರೈಡ್ ಇರುತ್ತದೆ. ಅಲ್ಲದೆ ಪ್ಲಾಸ್ಟಿಕ್ಕುಗಳ ತಯಾರಿಕೆಯಲ್ಲಿ ಬಳಸುವ ವೀನೈಲ್ ಕ್ಲೋರೈಡ್ (ಅಊ2-ಅಊಅI) ಥಯೊಕಾಲ್-ಎ ಎಂಬ ಕೃತಕ ರಬ್ಬರ್, ಎಥಿಲೀನ್ ಡಯಮೀನ್ (ಊ2ಓ.ಅಊ2-ಅಊ2.ಓಊ2)ಇವನ್ನು ಎಥಿಲೀನ್ ಡೈಕ್ಲೋರೈಡಿನಿಂದ ತಯಾರಿಸುತ್ತಾರೆ. (ಜಿ.ಆರ್.ಎಲ್.)