ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಎಬೊನೈಟ್

ವಿಕಿಸೋರ್ಸ್ದಿಂದ

ಎಬೊನೈಟ್ ಅಧಿಕ ಗಂಧಕ ಬೆರೆತ ಬಿರುಸಾದ ರಬ್ಬರ್, ರಬ್ಬರ್ ಮತ್ತು ಗಂಧಕವನ್ನು ಬೆರೆಸಿ 140ಲಿ - 160ಲಿ ಸೆಂ.ಗ್ರೇ. ಉಷ್ಣತೆಗೆ ಕಾಸಿ ಇದನ್ನು ತಯಾರಿಸಬಹುದು. ಸಾಮಾನ್ಯ ಉಷ್ಣತಾಮಿತಿಗಳಲ್ಲಿ ಬಿರುಸಾಗಿದ್ದು ಕಾಸಿದಾಗ ಮೃದುವಾಗುವುದು. ಸ್ಥಿತಿಸ್ಥಾಪಕತ್ವ ಗುಣವಿಲ್ಲ. ಗಡಸು ಮೈಗೀರುನಿರೋಧಕವಾಗಿದೆ. ಎರಕಹೊಯ್ದು ರಂಧ್ರ ಮಾಡಿ ಚೆನ್ನಾಗಿ ಹೊಳೆಯುವಂತೆಯೂ ಮಾಡಬಹುದು. ವಿದ್ಯುನ್ನಿರೋಧಕವಸ್ತು. ಹಲವಾರು ರಾಸಾಯನಿಕಗಳು ಇದರೊಡನೆ ವರ್ತಿಸುವುದಿಲ್ಲ. ರೇಡಿಯೊ, ತಾಂತ್ರಿಕ ಮುಂತಾದ ಉದ್ದಿಮೆಗಳಲ್ಲಿ ಹೆಚ್ಚಿನ ಉಪಯೋಗವಿದೆ. ರಸಾಯನೋದ್ಯಮದಲ್ಲಿ ರಕ್ಷಕ ಪದರವಾಗಿ ಉಪಯೋಗಿಸುವರು. ಅಚ್ಚುಹಾಕಿ ಕೋಶಪೆಟ್ಟಿಗೆ ಫೌಂಟನ್ ಪೆನ್ನು ಕೊಳವೆ, ಟೆಲಿಫೋನ್, ಹೆಣಿಗೆ, ತಂಬಾಕು ಚಿಲುಮೆ ಮುಂತಾದ ಹಲವಾರು ನಿತ್ಯೋಪಯೋಗಕಾರಿ ವಸ್ತುಗಳನ್ನು ಇದರಿಂದ ತಯಾರಿಸಬಹುದು. (ವಿ.ವಿ.ಜೆ.)